ಎಚ್.ಡಿ. ಕುಮಾರಸ್ವಾಮಿ‌ ಆಪ್ತ ಕೆ.ಪಿ. ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆ

Update: 2024-03-31 16:28 GMT

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್​ಗೆ ಟಿಕೆಟ್​ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ‌ ಅವರ ಆಪ್ತ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಇಂದು ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. 

ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕೆ.ಪಿ ಬಚ್ಚೇಗೌಡ ಮತ್ತು ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಸಹಿತ 50ಕ್ಕೂ ಅಧಿಕ ಮುಖಂಡರು ಸಾಕೇತಿಕವಾಗಿ ಕಾಂಗ್ರೆಸ್ ಸೇರಿದ್ದು, ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News