×
Ad

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಆರೋಪ; ರಾಜೀವ್ ಗೌಡಗೆ ಕೆಪಿಸಿಸಿ ನೋಟಿಸ್

Update: 2026-01-15 20:21 IST

ಬೆಂಗಳೂರು : ‘ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ಕ್ಷೇತ್ರದ 2023ರ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ಅವರಿಗೆ ಒಂದು ವಾರದಲ್ಲಿ ಘಟನೆ ಸಂಬಂಧ ಸೂಕ್ತ ಸಮಜಾಷಿ ನೀಡಬೇಕು. ಇಲ್ಲವಾದರೆ ಈ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿ, ಕೆಪಿಸಿಸಿ ವತಿಯಿಂದ ನೋಟಿಸ್ ನೀಡಲಾಗಿದೆ.

ಗುರುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ನೋಟಿಸ್ ನೀಡಿದ್ದು, ಶಿಡ್ಲಘಟ್ಟ ವ್ಯಾಪ್ತಿಯಲ್ಲಿ ಖಾಸಗಿ ಕಾರ್ಯಕ್ರಮದ ಸಭೆಯೊಂದಕ್ಕೆ ಸಂಬಂಧಪಟ್ಟಂತೆ ತಾವುಗಳು ಬ್ಯಾನರ್‍ಗಳನ್ನು ನಗರಸಭೆ ವ್ಯಾಪ್ತಿಯಲ್ಲಿ ಹಾಕಿರುವುದರ ಬಗ್ಗೆ ಸದರಿ ನಗರಸಭೆ ಪೌರಾಯುಕ್ತರೊಂದಿಗೆ ದೂರವಾಣಿ ಸಂಭಾಷಣೆ ನೆಡೆಸುವಾಗ ವ್ಯಕ್ತಿಗತ ನಿಂದನೆ ಮಾಡಿ, ಕೆಟ್ಟ ಪದಗಳನ್ನು ಉಪಯೋಗಿಸಿ ನಿಂದನೆ ಮಾಡಿರುವ ವಿಷಯಗಳು ಮಾಧ್ಯಮಗಳಲ್ಲಿ ಬಿತ್ತರಗೊಂಡಿದೆ’ ಎಂದು ಉಲ್ಲೇಖಿಸಿದ್ದಾರೆ.

‘ತಮ್ಮ ಈ ವರ್ತನೆ ಹಾಗೂ ತಾವು ಸದರಿ ನಗರಸಭೆ ಪೌರಾಯುಕ್ತರೊಂದಿಗೆ ಆಡಿರುವ ಮಾತುಗಳಿಂದ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತದೆ. ಅಲ್ಲದೆ, ತಾವುಗಳು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುತ್ತೀರಿ ಎಂದು ತಿಳಿದು ಕಾರಣ ಕೇಳಿ ನೋಟೀಸು ನೀಡುತ್ತಿದ್ದು, ಒಂದು ವಾರದ ಒಳಗಾಗಿ ಈ ಬಗ್ಗೆ ಸೂಕ್ತ ಉತ್ತರ ನೀಡಬೇಕು’ ಎಂದು ಚಂದ್ರಶೇಖರ್ ಸೂಚನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News