×
Ad

ಎಸ್‌ಐಆರ್ ಸಭೆಗೆ ಗೈರಾದ ಕೆಪಿಸಿಸಿ ಪದಾಧಿಕಾರಿಗಳ ವಜಾ

Update: 2026-05-27 13:46 IST

ಬೆಂಗಳೂರು: ಎಸ್‌ಐಆರ್ ಸಭೆಗೆ ಗೈರಾಗಿದ್ದ ಕೆಪಿಸಿಸಿ ಪದಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮ ಕೈಗೊಂಡಿದೆ. ಎಸ್‌ಐಆರ್ ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮೂವರು ಉಪಾಧ್ಯಕ್ಷರು ಸೇರಿದಂತೆ ಹಲವು ಪದಾಧಿಕಾರಿಗಳನ್ನು ವಜಾ ಮಾಡಿದೆ.

ಪಕ್ಷದ ಸೂಚನೆಯನ್ನು ಉಲ್ಲಂಘಿಸಿ ಸಭೆಗೆ ಗೈರಾದ ಹಿನ್ನೆಲೆಯಲ್ಲಿ ಮೂವರು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ 29 ಪ್ರಧಾನ ಕಾರ್ಯದರ್ಶಿಗಳನ್ನು ವಜಾಗೊಳಿಸಿದೆ. ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಎಚ್ಚರಿಕೆಯನ್ನು ಕಡೆಗಣಿಸಿದ್ದೇ ಈ ಕ್ರಮಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ವಜಾಗೊಂಡವರಲ್ಲಿ ನಿಕೇತ್ ರಾಜ್ ಮೌರ್ಯ, ಭಾವನಾ ರಾಮಣ್ಣ, ಶಿವಮೂರ್ತಿ ನಾಯಕ್, ಎಂ ಸಿ ವೇಣುಗೋಪಾಲ್, ಷಣ್ಮುಖ ಶಿವಳ್ಳಿ ಹಾಗೂ ಸಿಆರ್ ಮನೋಹರ್ ಸೇರಿದಂತೆ ಹಲವು ನಾಯಕರು ಸೇರಿದ್ದಾರೆ.

ಸಭೆಗೆ ಗೈರಾಗಿದ್ದ ವಿಚಾರವನ್ನು ಸುರ್ಜೇವಾಲಾ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News