ಕೆಪಿಎಸ್‍ಸಿ ನೇಮಕಾತಿ ಹಗರಣ: ಅಭ್ಯರ್ಥಿಗಳಿಂದ ವಶಪಡಿಸಿಕೊಂಡಿರುವ ಕಾರ್ಬನ್ ಶೀಟ್ ಎಫ್‍ಎಸ್‍ಎಲ್‍ಗೆ ರವಾನೆ

Update: 2026-08-21 20:10 IST

ಬೆಂಗಳೂರು : ಕೆಪಿಎಸ್‍ಸಿ ನೇಮಕಾತಿ ಹಗರಣದ ಕುರಿತು ಅಪರಾಧ ತನಿಖಾ ಇಲಾಖೆ(ಸಿಐಡಿ) ತನಿಖೆ ನಡೆಯುತ್ತಿದ್ದು, 329 ಅಭ್ಯರ್ಥಿಗಳಿಂದ ವಶಪಡಿಸಿಕೊಂಡಿರುವ 658 ಓಎಂಆರ್ ಕಾರ್ಬನ್ ಶೀಟ್‍ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‍ಎಸ್‍ಎಲ್) ರವಾನಿಸಲಾಗಿದೆ ಎಂದು ವರದಿಯಾಗಿದೆ.

ಸಿಐಡಿ ಅಧಿಕಾರಿಗಳು 329 ಅಭ್ಯರ್ಥಿಗಳನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಅಭ್ಯರ್ಥಿಗಳು ತಮ್ಮ ಬಳಿಯಿರುವ ಕಾರ್ಬನ್ ಶೀಟ್‍ಗಳೊಂದಿಗೆ ಹಾಜರಾಗುವಂತೆ ಸೂಚಿಸಿದ್ದರು. ಅದರಂತೆ ಅಭ್ಯರ್ಥಿಗಳಿಂದ ಒಟ್ಟು 658 ಕಾರ್ಬನ್ ಶೀಟ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಓಎಂಆರ್ ಶೀಟ್‍ಗಳೊಂದಿಗೆ ಕಾರ್ಬನ್ ಶೀಟ್‍ಗಳನ್ನು ತಾಳೆ ಹಾಕಿ ಪರಿಶೀಲಿಸುವ ಉದ್ದೇಶದಿಂದ ಅವುಗಳನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಲಾಗಿದೆ.

ಪರೀಕ್ಷೆ ವೇಳೆ ಅಭ್ಯರ್ಥಿಗಳು ಗುರುತಿಸುವ ಉತ್ತರಗಳ ಕಾರ್ಬನ್ ಪ್ರತಿಯನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. ಇದೇ ಕಾರ್ಬನ್ ಪ್ರತಿಯನ್ನು ಮೂಲ ಓಎಂಆರ್ ಶೀಟ್‍ನೊಂದಿಗೆ ಹೋಲಿಕೆ ಮಾಡುವ ಮೂಲಕ ಉತ್ತರಗಳಲ್ಲಿ ಬದಲಾವಣೆ ನಡೆದಿದೆಯೇ ಎಂಬುದನ್ನು ತನಿಖಾಧಿಕಾರಿಗಳು ಪರಿಶೀಲಿಸಲಿದ್ದಾರೆ. ಈ ಸಂಬಂಧ ಒಂದು ವಾರದೊಳಗೆ ಓಎಂಆರ್ ಶೀಟ್‍ಗಳಲ್ಲಿನ ತಿದ್ದುಪಡಿ ಕುರಿತು ಮಾಹಿತಿ ನೀಡುವಂತೆ ಎಫ್‍ಎಸ್‍ಎಲ್ ಆಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News