ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧಿತನಾಗಿರುವ ಬಸವರಾಜ್ ಕನ್ನಾಳೆ ಅವರ RSS ಪಥಸಂಚಲನದ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಅಭ್ಯರ್ಥಿಗಳು ಮತ್ತು ಜ್ಞಾನೇಂದ್ರ ಗಂಗ್ವಾರ್ ನಡುವಿನ ಪರೀಕ್ಷಾ ಅಕ್ರಮದಲ್ಲಿ ಬಸವರಾಜ್ ಕನ್ನಾಳೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಅವರನ್ನು ಬಂಧಿಸಿದ್ದರು. ಅಲ್ಲದೆ, ಜಾರಿ ನಿರ್ದೇಶನಾಲಯದ (ಈಡಿ) ಅಧಿಕಾರಿಗಳು ಕೂಡ ಕನ್ನಾಳೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಾಳೆ ಅವರಿಗೆ ಆರು ದಿನಗಳ ಮಧ್ಯಂತರ ಜಾಮೀನು ಮಂಜೂರಾಗಿದ್ದು, ನಾಳೆ ಜೈಲಿಗೆ ಮರಳಬೇಕಿದೆ.

ಈ ನಡುವೆ, ಬಸವರಾಜ್ ಕನ್ನಾಳೆ RSS ಪಥಸಂಚಲನದಲ್ಲಿ ಭಾಗವಹಿಸಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಪಥಸಂಚಲನದಲ್ಲಿ ಅವರು ನಾಯಕತ್ವ ವಹಿಸಿಕೊಂಡು ಮುಂಚೂಣಿಯಲ್ಲಿ ಸಾಗುತ್ತಿದ್ದರು ಎನ್ನಲಾಗಿದ್ದು, ಈ ಫೋಟೊಗಳು ಇದೀಗ ಚರ್ಚೆಗೆ ಗ್ರಾಸವಾಗಿವೆ.

 

 

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor