ಸಾಂದರ್ಭಿಕ ಚಿತ್ರ | Image by magnific

ಬೆಂಗಳೂರು : KPSC ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಯದರ್ಶಿ ಟಿ ಪ್ರಕಾಶ್ ಗೆ ಬಂಧನ ಭೀತಿ ಎದುರಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ 52 ನೇ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಟಿ ಪ್ರಕಾಶ್ KPSCಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿ ಕಳೆದ ಮೇ ತಿಂಗಳಲ್ಲಿ ನಿವೃತ್ತಿ ಹೊಂದಿದ್ದರು. ಇವರ ಮನೆಗಳ ಮೇಲೆ KPSC ನೇಮಕಾತಿ‌ ಅಕ್ರಮಕ್ಕೆ ಸಂಬಂಧಿಸಿದಂತೆ ಈ.ಡಿ ಹಾಗೂ ಸಿಐಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದರು. ಟಿ ಪ್ರಕಾಶ್ ಅವರು ಈಗ ಆರೋಪ ಕೇಳಿ ಬಂದಿರುವ ಪಶು ವೈದ್ಯಾಧಿಕಾರಿಗಳ ನೇಮಕಾತಿ, 384 ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿಗಳ ನೇಮಕಾತಿ ವೇಳೆಯಲ್ಲಿ ಸೇವೆಯಲ್ಲಿ ಇದ್ದರು.

ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಟಿ ಪ್ರಕಾಶ್ ನ್ಯಾಯಾಲಯದ ಮೊರೆ ಹೋಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor