ಸಾಂದರ್ಭಿಕ ಚಿತ್ರ | PC : PTI

ಬೆಂಗಳೂರು : ಕೆಪಿಎಸ್‌ಸಿ ನೇಮಕಾತಿ ಅಕ್ರಮ ಸಂಬಂಧ ಜಾರಿ ನಿರ್ದೇಶನಾಲಯ (ಈ.ಡಿ) 1.22 ಕೋಟಿ ರೂ. ಮೌಲ್ಯದ ಆಸ್ತಿಯನ್ನು PMLA ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ನೇಮಕಾತಿ ಅಕ್ರಮ ಸಂಬಂಧ ಅಕ್ಟೋಬರ್ 6 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಕೆಪಿಎಸ್‌ಸಿ ಸದಸ್ಯೆ ಗೀತಾ ಬಿ.ವಿ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮನೆಗಳ ಮೇಲೆ ಏಕ ಕಾಲಕ್ಕೆ ದಾಳಿ ಮಾಡಲಾಗಿತ್ತು.

ಈ ದಾಳಿಯ ವೇಳೆ ಪತ್ತೆಯಾದ 1.22 ಕೋಟಿ ರೂ. ಮೌಲ್ಯದ ಸ್ಥಿರ ಹಾಗೂ ಚರಾಸ್ಥಿಯನ್ನು  ತನಿಖೆಯ ಭಾಗವಾಗಿ ಮುಟ್ಟುಗೋಲು ಹಾಕುತ್ತಿರುವುದಾಗಿ ಈ.ಡಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor