×
Ad

ಹಾಸನ ಜಿಲ್ಲಾ ಉಸ್ತುವಾರಿಯಾಗಿ ಕೃಷ್ಣ ಭೈರೇಗೌಡ, ಬಳ್ಳಾರಿಗೆ ರಹೀಂ ಖಾನ್

Update: 2025-08-07 18:10 IST

ರಹೀಂ ಖಾನ್/ಕೃಷ್ಣ ಭೈರೇಗೌಡ

ಬೆಂಗಳೂರು : ಹಾಸನ ಜಿಲ್ಲೆಯ ಉಸ್ತುವಾರಿ ಆಗಿ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ, ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಆಗಿ ಪೌರಾಡಳಿತ ಸಚಿವ ರಹೀಂ ಖಾನ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಹಾಸನ ಜಿಲ್ಲೆಗೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಬದಲು ನೂತನ ಉಸ್ತುವಾರಿಯಾಗಿ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಅವರನ್ನು ನೇಮಿಸಿದೆ. ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರನ್ನು ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಆಗಸ್ಟ್ 15ರಂದು ನಡೆಯುವ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಲು ಹಾಸನ ಮತ್ತು ಬಳ್ಳಾರಿ ಜಿಲ್ಲೆಗೆ ನೂತನ ಉಸ್ತುವಾರಿ ಸಚಿವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಿಸಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ಬಳ್ಳಾರಿ ಜಿಲ್ಲೆಯಲ್ಲಿ ಉಸ್ತುವಾರಿ ಸ್ಥಾನವೂ ಹೋಗಿತ್ತು. ಬಳಿಕ ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಿಸಿದ್ದರು. ಈಗ ಸಚಿವ ರಹೀಂ ಖಾನ್ ಅವರಿಗೆ ಈ ಸ್ಥಾನ ಒಲಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News