×
Ad

ಕೆಎಸ್ಸಾರ್ಟಿಸಿಗೆ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ

Update: 2025-09-28 19:02 IST

ಬೆಂಗಳೂರು, ಸೆ.28 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ(ಪಿಆರ್‌ಸಿಐ) ವತಿಯಿಂದ ನಡೆದ 15ನೇ ವಿಶ್ವ ಸಂವಹನ ಸಮ್ಮೇಳನ ಮತ್ತು ಎಕ್ಸಲೆನ್ಸ್ ಅವಾರ್ಡ್ಸ್‌-2025ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಗಳಿಸಿದೆ.

ಡಿಜಿಟಲ್ ಮೀಡಿಯಾ ಇನೋವೇಶನ್ ಮತ್ತು ಹೌಸ್ ಜರ್ನಲ್ ಪ್ರಿಂಟ್ (ಪ್ರಾದೇಶಿಕ) ವಿಭಾಗದಲ್ಲಿ ಚಿನ್ನದ ಪದಕ, ಹೆಲ್ತ್ ಕೇರ್ ಕಮ್ಯುನಿಕೇಶನ್ ಫಿಲ್ಮ್ಸ್ ವಿಭಾಗದಲ್ಲಿ ಬೆಳ್ಳಿ ಪದಕ, ವಿಶಿಷ್ಟ ಮಾನವ ಸಂಪನ್ಮೂಲ ಕಾರ್ಯಕ್ರಮಕ್ಕಾಗಿ ಕಂಚಿನ ಪದಕ, ಗ್ರಾಹಕ ಸೇವಾ ಶ್ರೇಷ್ಠತೆ, ವೆಬ್‍ಸೈಟ್ ಮತ್ತು ಮೈಕ್ರೋಸೈಟ್, ಕಾರ್ಪೊರೇಟ್‌ ಫಿಲ್ಮ್ಸ್, ಮಾರ್ಕೆಟಿಂಗ್ ಕ್ಯಾಂಪೇನ್ ಮತ್ತು ಆಂತರಿಕ ಕಮ್ಯುನಿಕೇಶನ್ ಕ್ಯಾಂಪೇನ್ ವಿಭಾಗಗಳಲ್ಲಿ ಪ್ರಶಸ್ತಿಗಳು ಲಭಿಸಿವೆ.

ಈ ಪ್ರಶಸ್ತಿಗಳು ನಿಗಮವು ಆಧುನಿಕ ತಂತ್ರಜ್ಞಾನ, ನವೀನ ಚಟುವಟಿಕೆಗಳು ಮತ್ತು ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಕಾರ್ಯಾಚರಣೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿರುವುದಕ್ಕೆ ಸಾಕ್ಷಿಯಾಗಿದೆ.

ಗೋವಾದ ಖಾಸಗಿ ಹೋಟೆಲ್‍ನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಗೋವಾ ವಿಧಾನಸಭೆಯ ಸಭಾಧ್ಯಕ್ಷ ಡಾ. ಗಣೇಶ್ ಗಾಂವ್ಕರ್, ನಟಿ ಎಸ್ಟರ್ ವ್ಯಾಲೆರಿ ನೊರೊನ್ಹಾ, ನಟ, ರೂಪದರ್ಶಿ ಮಿಲಿನ್ ತೆಂಡೂಲ್ಕರ್, ಪಿಆರ್‍ಸಿಐ ಅಧ್ಯಕ್ಷ ಎಂ.ಬಿ.ಜಯರಾಮ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್, ಚಿಕ್ಕಬಳ್ಳಾಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜು ಅವರು ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News