×
Ad

ಕೆಎಸ್ಸಾರ್ಟಿಸಿ ನೂತನ ‘ಅಶ್ವಮೇಧ’ ಬಸ್ ಗಳಿಗೆ ನಾಳೆ(ಫೆ.5) ಚಾಲನೆ

Update: 2024-02-04 20:55 IST

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಸಾರ್ಟಿಸಿ) ನೂತನ ‘ಅಶ್ವಮೇಧ ಕ್ಲಾಸಿಕ್’ ಹೊಸ ವಿನ್ಯಾಸದ 800 ಕರ್ನಾಟಕ ಸಾರಿಗೆ ಬಸ್ಸುಗಳನ್ನು ಮೇ-2024ರ ಅಂತ್ಯದೊಳಗೆ ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಿದ್ದು, ಈ ಪೈಕಿ ಮೊದಲ ಹಂತದಲ್ಲಿ 100 ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ(ಫೆ.5) ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ನಿಗಮದ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ರಿಝ್ವಾನ್ ಅರ್ಶದ್ ವಹಿಸಲಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News