×
Ad

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಖಚಿತ : ಕುಮಾರ ಬಂಗಾರಪ್ಪ

Update: 2025-02-22 18:32 IST

ಕುಮಾರ ಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದು ಖಚಿತ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಮ್ಮ ಬಣದಿಂದ ಅಭ್ಯರ್ಥಿ ಹಾಕುವ ನಿರ್ಧಾರದಿಂದ ನಾವು ಹಿಂದೆ ಸರಿದಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಬಣದ ಮಾಜಿ ಸಚಿವ ಕುಮಾರ ಬಂಗಾರಪ್ಪ ತಿಳಿಸಿದ್ದಾರೆ.

ಶನಿವಾರ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದ ವಿದ್ಯಮಾನಗಳ ಬಗ್ಗೆ ನಾವು ಹೈಕಮಾಂಡ್ ಮಾಹಿತಿ ಕೊಟ್ಡಿದ್ದೇವೆ. ನಮ್ಮ ನಿರ್ಧಾರದಿಂದ ನಾವು ಹಿಂದೆ ಸರಿಯಲ್ಲ. ರಾಜ್ಯಾಧ್ಯಕ್ಷರ ಚುನಾವಣೆಗೆ ನಾವು ಸ್ಪರ್ಧೆ ಮಾಡುತ್ತೇವೆ ಎಂದರು.

ಕರ್ನಾಟಕದಲ್ಲಿ ನೂರಕ್ಕೆ ನೂರು ರಾಜ್ಯಾಧ್ಯಕ್ಷರ ಬದಲಾವಣೆ ಆಗೇ ಆಗುತ್ತದೆ. ಚುನಾವಣೆ ನಡೆಯುವ ಸನ್ನಿವೇಶ ಬಂದರೆ ನಾಮಪತ್ರ ಸಲ್ಲಿಕೆ ಮಾಡುವ ಅವಶ್ಯಕತೆ ಬಂದರೆ ನಾವು ನಾಮಪತ್ರ ಸಲ್ಲಿಕೆ ಮಾಡುತ್ತೇವೆ ಎಂದು ಕುಮಾರ ಬಂಗಾರಪ್ಪ ಹೇಳಿದರು.

ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಅನ್ನು ರಾಜಕೀಯವಾಗಿ ಕೊಟ್ಟಿಲ್ಲ. ಯತ್ನಾಳ್ ಆ ನೋಟಿಸ್‍ಗೆ ಉತ್ತರ ಕೊಟ್ಟಿದ್ದಾರೆ. ನಾವು ಯತ್ನಾಳ್ ಜೊತೆ ಇದ್ದೇವೆ. ಹೈಕಮಾಂಡ್ ನೋಟಿಸ್‍ನಿಂದ ನಾವು ಯಾರೂ ವಿಚಲಿತ ಆಗಿಲ್ಲ. ಚುನಾವಣೆ ಆಗುವವರೆಗೂ ನಮ್ಮ ವಾದ ಇದ್ದೇ ಇರುತ್ತದೆ ಎಂದು ಕುಮಾರ ಬಂಗಾರಪ್ಪ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News