ಕುಮಾರಸ್ವಾಮಿ ಅವರ ನಿವಾಸಕ್ಕೆ ಕೆ.ಎಸ್. ಈಶ್ವರಪ್ಪ ಭೇಟಿ
Update: 2023-09-13 12:10 IST
ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ಬುಧವಾರ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಕುಮಾರಸ್ವಾಮಿ ಅವರು ಇತ್ತೀಚೆಗೆ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ್ದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಉಪಸ್ಥಿತರಿದ್ದರು.