×
Ad

ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್. ಕೆ. ಅತೀಖ್ ನೇಮಕ

Update: 2023-11-27 11:55 IST

ಎಲ್. ಕೆ. ಅತೀಖ್ (Photo credit: Deccan Herald)

ಬೆಂಗಳೂರು: ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಎಲ್ ಕೆ ಅತೀಖ್ ಅವರನ್ನು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಈವರೆಗೆ ಆ ಹುದ್ದೆಯಲ್ಲಿದ್ದ ಡಾ. ರಜನೀಶ್ ಗೋಯಲ್ ಅವರನ್ನು ಆ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ರಜನೀಶ್ ಗೋಯಲ್ ಅವರು ರಾಜ್ಯದ ಹೊಸ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ.

ಎಲ್ ಕೆ ಅತೀಖ್ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿಯೂ ಮುಂದಿನ ಆದೇಶದವರೆಗೆ ಹೆಚ್ಚುವರಿ ಹೊಣೆ ನಿರ್ವಹಿಸಲಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News