×
Ad

ಸಂಸತ್ತಿನಲ್ಲಿ ಭಾರೀ ಭದ್ರತಾ ವೈಫಲ್ಯ : ಮೈಸೂರಿನ ಸಂಸದ ಪ್ರತಾಪ್‌ ಸಿಂಹರ ಕಚೇರಿಗೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮುತ್ತಿಗೆ, ಪ್ರತಿಭಟನೆ

Update: 2023-12-13 18:20 IST

ಮೈಸೂರು: ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ, ಆರೋಪಿಗಳು ಮೈಸೂರು ಸಂಸದರಾದ ಪ್ರತಾಪ್‌ ಸಿಂಹ ಅವರ ಕಚೇರಿಯಿಂದ ಸಂಸತ್‌ ಭವನದ ಪಾಸ್‌ ಪಡೆದಿದ್ದರು ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ, ಮೈಸೂರು ಗ್ರಾಮಾಂತರ ವಿಭಾಗದ ಕಾಂಗ್ರೆಸ್‌ ಕಾರ್ಯಕರ್ತರು ಸಂಸದರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನ ಜಲದರ್ಶಿನಿ ಅತಿಥಿಗೃಹ ಆವರಣದಲ್ಲಿರುವ ಸಂಸದ ಪ್ರತಾಪ್ ಸಿಂಹರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಈ ಕೃತ್ಯಕ್ಕೆ ಸಂಸದರೇ ನೇರ ಹೊಣೆ ಎಂದು ಆರೋಪಿಸಿದ್ದಾರೆ. ಪ್ರತಾಪ್ ಸಿಂಹ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರನ್ನು ನಿಯಂತ್ರಿಸಲು ಭಾರೀ ಸಂಖ್ಯೆಯ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News