×
Ad

ಅಂಗನವಾಡಿ ಕೇಂದ್ರದಲ್ಲಿ L.K.G, UKG ತರಗತಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಚಾಲನೆ

Update: 2024-07-22 15:13 IST

ಬೆಂಗಳೂರು : ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಆರಂಭಿಸಲಾಗಿರುವ ಸರಕಾರಿ ಮಾಂಟೆಸ್ಸರಿ (L.K.G, UKG) ತರಗತಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸೋಮವಾರ ಚಾಲನೆ ನೀಡಿದರು. ಬೆಂಗಳೂರಿನ ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಟ್ಟೇಗಾರ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ಚಾಲನೆ ನೀಡಿದರು.

ಇಂದು ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಹಾಗೂ ರಾಜ್ಯಾದ್ಯಂತ 500 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ.

ಈ ವೇಳೆ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಕಲಾಂಗ ಇಲಾಖೆಯ ಆಯುಕ್ತರಾದ ದಾಸ್ ಸೂರ್ಯವಂಶಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News