×
Ad

ಹಾಸನ ಸಮಾವೇಶವು ಕಾಂಗ್ರೆಸ್‌ ಕಾಯಕರ್ತರಿಗೆ ಅಭಿನಂದನೆ ಸಲ್ಲಿಸುವ ಸಮಾವೇಶ : ಲಕ್ಷ್ಮೀ ಹೆಬ್ಬಾಳ್ಕರ್‌

Update: 2024-12-03 16:44 IST

ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು : ಹಾಸನದಲ್ಲಿ ಗುರುವಾರ ನಡೆಯಲಿರುವುದು ಸ್ವಾಭಿಮಾನ ಸಮಾವೇಶ ಅಲ್ಲ, ಅದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಮಾಡುತ್ತಿರುವ ಸಮಾವೇಶ, ಇದು ಕೇವಲ ಹಾಸನದಲ್ಲಿ ಅಷ್ಟೇ ಅಲ್ಲ, ಇಡೀ ಕರ್ನಾಟಕದಲ್ಲಿ ಇಂಥ ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದು ಅಹಿಂದ ಸಮಾವೇಶ ಅಲ್ಲ, ಮುಖ್ಯಮಂತ್ರಿಗಳು ಕಾಂಗ್ರೆಸ್‌ ಪಕ್ಷದವರಾಗಿದ್ದು, ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾರೆ ಎಂದು ಹೇಳಿದರು.

ಬಿಜೆಪಿ ಆರೋಪ ನಿರಾಧಾರ :

ಗ್ಯಾರಂಟಿ ಯೋಜನೆಗಳಿಗೆ ಹಣ ಪೂರೈಸಲು ಸಾರಿಗೆ ನಿಗಮಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಬಿಬಿಎಂಪಿಯನ್ನೇ ಅಡ ಇಟ್ಟಿದ್ದರು. ವಿಧಾನಸೌಧ ಒಂದನ್ನು ಬಿಟ್ಟು ಬಹುತೇಕ ಆಸ್ತಿಪಾಸ್ತಿಗಳನ್ನು ಅಡವಿಟ್ಟಿದ್ದರು ಎಂದು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರು ಆರ್ಥಿಕ ತಜ್ಙ ಅಂತಾನೆ ಹೆಸರುಗಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 58 ಸಾವಿರ ಕೋಟಿ ಮೀಸಲಿಟ್ಟಿದ್ದರೂ ಯಾವುದೇ ಸಾಲ ಹೊರೆ ಹೊರಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ತುಂಬಾ ಚೆನ್ನಾಗಿ ನಡೆಯುತ್ತಿದೆ ಎಂದು ಸಚಿವರು ಹೇಳಿದರು.

ಅನುದಾನ ಕಡಿತವಿಲ್ಲ :

ವಿಕಲ ಚೇತನ ಇಲಾಖೆಗೆ 46 ಕೋಟಿ ಅನುದಾನ ಕಡಿತ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ‌ ಇಲಾಖೆಗೆ ವಿಕಲಚೇತನರಿಂದ ಸಾಕಷ್ಟು ಅರ್ಜಿಗಳು ಬರುತ್ತವೆ. ವೀಲ್ ಚೇರ್, ಸ್ಕೂಟರ್, ಲ್ಯಾಪ್ ಟಾಪ್ , ಬ್ರೈಲ್ ಕಿಟ್ ಕೊಡಬೇಕು. ಹೀಗೆ ಸಾಕಷ್ಟು ಅರ್ಜಿಗಳು ಬಂದಾಗ ಇದಕ್ಕೆಲ್ಲಾ ಹಣಕಾಸು ಬೇಕಾಗಿದೆ. ಇದಕ್ಕೆ ಈಗಾಗಲೇ 14 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಉಳಿದ ಹಣ ಶೀಘ್ರವೇ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ಕೊಟ್ಟಿದ್ದಾರೆ ಎಂದು ಸಚಿವರು ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News