×
Ad

ʼಗೃಹಲಕ್ಷ್ಮಿʼ 2 ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ : ಲಕ್ಷ್ಮೀ ಹೆಬ್ಬಾಳ್ಕರ್

Update: 2025-03-03 17:49 IST

ಬೆಂಗಳೂರು : ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಸೋಮವಾರ ವಿಧಾನಸೌಧ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ ಎಂದರು.

‘ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ’ ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ಅವರು ತಿಳಿಸಿದರು.

ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News