ಲಾಯರ್ ಜಗದೀಶ್ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡನೆ
Update: 2025-08-18 14:24 IST
File Photo
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವೈಯುಕ್ತಿಕವಾಗಿ ನಿಂದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಲಾಯರ್ ಜಗದೀಶ್ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ ಅಂಗೀಕರಿಸಿದ ಸ್ಪೀಕರ್ ಯು ಟಿ ಖಾದರ್ ಪ್ರಕರಣದ ವಿಚಾರಣೆಯನ್ನು ಹಕ್ಕುಬಾಧ್ಯತಾ ಸಮಿತಿಗೆ ವಹಿಸಿದ್ದಾರೆ.
ವಿಧಾನಸಭೆಯಲ್ಲಿಂದು ಯಲಹಂಕ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಲಾಯರ್ ಜಗದೀಶ್ ವಿರುದ್ಧ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡಿದರು.
ಬಳಿಕ ಅವರು ಪ್ರಸ್ತಾಪಿಸಿ, ಧರ್ಮಸ್ಥಳ ವಿಚಾರ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಆಧಾರ ರಹಿತ ನನ್ನನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಲಾಯರ್ ಜಗದೀಶ್ ತೇಜೋವಧೆ ಮಾಡಿದ್ದು, ಇದು ನನ್ನ ಹಕ್ಕಿಗೆ ಧಕ್ಕೆಯಾಗಿದೆ ಎಂದರು.
ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ನಿಯಮಾವಳಿ ಅನ್ವಯ ನೋಟಿಸ್ ಜಾರಿ ಮಾಡಲಾಗುವುದು ಎಂದರು.
ಸ್ಪೀಕರ್ ಯು.ಟಿ.ಖಾದರ್, ಪ್ರಕರಣದ ವಿಚಾರಣೆಯನ್ನು ಹಕ್ಕುಬಾಧ್ಯತಾ ಸಮಿತಿಗೆ ವಹಿಸುವುದಾಗಿ ಪ್ರಕಟಿಸಿದರು.