ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ : ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಕೆ
Update: 2025-05-02 20:24 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ವಕೀಲೆಜೀವಾ ಆತ್ಮಹತ್ಯೆ ಪ್ರಕರಣ ಸಂಬಂಧ ಎಸ್‍ಐಟಿ ತಂಡವು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ 2,300 ಪುಟಗಳ ಚಾರ್ಜ್‍ಶೀಟ್ ಸಲ್ಲಿಸಿರುವುದಾಗಿ ವರದಿಯಾಗಿದೆ.
ಎಸ್‍ಐಟಿ ಅಧಿಕಾರಿಗಳು ತನಿಖೆ ವೇಳೆಯಲ್ಲಿ ಚಿತ್ರೀಕರಿಸಿದ ವಿಡಿಯೋ, ಎಫ್‍ಎಸ್‍ಎಲ್ ವರದಿ ಸೇರಿದಂತೆ ವಿವಿಧ ಮಹತ್ವ ಮಾಹಿತಿಗಳನ್ನು ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
2024ರ ನವೆಂಬರ್ 22ರಂದು ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ತಮ್ಮ ಮನೆಯಲ್ಲಿ ವಕೀಲೆ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ 13 ಪುಟಗಳ ಡೆತ್‍ನೋಟ್ ಬರೆದಿಟ್ಟಿದ್ದರು. ಈ ಆತ್ಮಹತ್ಯೆ ಪ್ರಕರಣದ ತನಿಖೆಗೆ ಹೈಕೋರ್ಟ್, ಸಿಬಿಐ ಎಸ್‍ಪಿ ವಿನಾಯಕ್ ವರ್ಮಾ, ಸಿಸಿಬಿ ಡಿಸಿಪಿ ಅಕ್ಷಯ್ ಮಚೀಂದ್ರ, ಐಎಸ್‍ಡಿ ಎಸ್‍ಪಿ ನಿಶಾ ಜೇಮ್ಸ್ ಒಳಗೊಂಡ ಎಸ್‍ಐಟಿ ತಂಡ ರಚಿಸಿತ್ತು.