×
Ad

ʼಧರ್ಮಸ್ಥಳ ಪ್ರಕರಣʼ | ಸಿಎಂರನ್ನು ಭೇಟಿಯಾದ ಬಾಲನ್, ಸಿ.ಎಸ್.ದ್ವಾರಕನಾಥ್ ನೇತೃತ್ವದ ವಕೀಲರ ನಿಯೋಗ

Update: 2025-07-16 18:36 IST

ಬೆಂಗಳೂರು : ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.

ಆಧಿಕೃತ ನಿವಾಸ ಕಾವೇರಿಯನ್ನು ಮುಖ್ಯಮಂತ್ರಿಗಳನ್ನು ಭೇಟಿಯಾದ ವಕೀಲರ ನಿಯೋಗವು ಈ ಸಂಬಂಧ ಮನವಿಯನ್ನು ಸಲ್ಲಿಸಿದೆ.

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಸಿ.ಎಸ್. ದ್ವಾರಕಾನಾಥ್ ಅವರು, "ಇವತ್ತು ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ, ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದಂತಹ ಸಾಮೂಹಿಕ ಅತ್ಯಾಚಾರ, ಹತ್ಯೆ ಮತ್ತು ಹೂತು ಹಾಕಿರುವ ಘಟನೆಗೆ ಸಂಬಂಧಿಸಿದಂತೆ  ಚರ್ಚೆ ನಡೆಸಿದ್ದೇವೆ. ಈಗಾಗಲೇ ಅಲ್ಲಿ ತನಿಖೆ ನಡೆಯುತ್ತಿದ್ದು, ಒಬ್ಬರು ದೂರು ಕೂಡ ನೀಡಿದ್ದಾರೆ. ಆ ವ್ಯಕ್ತಿಗೆ ಸೂಕ್ತ ರಕ್ಷಣೆ ನೀಡಬೇಕಾಗಿದೆ. ಅಲ್ಲದೆ, ಆ ವ್ಯಕ್ತಿ ಹೇಳುವ ಜಾಗದಲ್ಲಿ ಪರಿಶೀಲನೆ ನಡೆಸಬೇಕಾಗುತ್ತದೆ. ಹೀಗಾಗಿ ಈ ಪ್ರಕರಣವನ್ನು ಎಸ್‌ಐಟಿಗೆ ನೀಡಬೇಕು ಎಂದು ಮನವಿ ಮಾಡಿದ್ದೇವೆ" ಎಂದು ತಿಳಿಸಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News