ವಿಧಾನ ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
Update: 2026-03-10 19:39 IST
ಸಾಂದರ್ಭಿಕ ಚಿತ್ರ (PTI)
ಬೆಂಗಳೂರು : ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ರಾಜ್ಯ ವಿಧಾನಪರಿಷತ್ತಿನ ವಿವಿಧ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳನ್ನು ಮಂಗಳವಾರ ಪ್ರಕಟಿಸಿದೆ.
ಈಶಾನ್ಯ ಶಿಕ್ಷಕ್ಷರ ಕ್ಷೇತ್ರ-ಶಶೀಲ್ ಜಿ.ನಮೋಶಿ, ಪಶ್ಚಿಮ ಪದವೀಧರ ಕ್ಷೇತ್ರ-ಎಸ್.ವಿ.ಸಂಕನೂರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೆ.ಎಂ.ಸುರೇಶ್ ಅವರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿರುವುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.