ಬೆಂಗಳೂರು, ಅ. 19: ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಅ.23ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹ ಮತದಾರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ.

ಸಂಬಂಧಪಟ್ಟ ಕ್ಷೇತ್ರಗಳ ಅರ್ಹ ಪದವೀಧರ ಹಾಗೂ ಶಿಕ್ಷಕ ಮತದಾರರಿಗೆ ಮಾತ್ರ ಮತ ಚಲಾಯಿಸಲು ಅನುಕೂಲವಾಗುವಂತೆ ಈ ರಜೆ ನೀಡಲಾಗಿದೆ. ಮತದಾರರು ಸೂಕ್ತ ಹಾಗೂ ಅಧಿಕಾರವುಳ್ಳ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor