×
Ad

ವಿಧಾನ ಪರಿಷತ್ ಚುನಾವಣೆ : ಶಾಸಕರಿಂದ ಮತದಾನ

Update: 2026-06-18 10:52 IST

ಬೆಂಗಳೂರು : ರಾಜ್ಯ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದ್ದು, ಶಾಸಕರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.

ಚುನಾವಣೆಯಲ್ಲಿ ಅಡ್ಡಮತದಾನ ಆಗುವ ಭೀತಿ ಎದುರಾಗಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ರೆಸಾರ್ಟ್ ರಾಜಕೀಯದ ಮೊರೆ ಹೋಗಿವೆ.

ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಚುನಾವಣೆಯಲ್ಲಿ ಶಾಸಕರು ಮತಪತ್ರದ ಮೂಲಕ ಗೌಪ್ಯ ಮತದಾನ ಮಾಡುವ ಹಿನ್ನೆಲೆಯಲ್ಲಿ ಕೊಠಡಿಯಲ್ಲಿ ಎರಡು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನ ನಡೆಯುವ ಕೊಠಡಿಯ ಒಳಗೆ ಹಾಗೂ ಹೊರಭಾಗದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಯಾವುದೆ ರೀತಿಯ ಅಹಿತಕರ ಘಟನೆ ನಡೆಯದಂತೆ ಭದ್ರತೆಗಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

 

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News