ವಿಧಾನ ಪರಿಷತ್ ಚುನಾವಣೆ | ಮತ ಚಲಾಯಿಸಿ ಬಿಜೆಪಿ ಉಚ್ಛಾಟಿತ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದೇನು ?
Update: 2026-06-18 11:53 IST
ಬೆಂಗಳೂರು: ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ತಾವು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿದ್ದೇನೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಮತ ಹಾಕುವಂತೆ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕಿಸಿಲ್ಲ. ಜೆಡಿಎಸ್ ಮುಖಂಡರೂ ಯಾವುದೇ ರೀತಿಯಲ್ಲಿ ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಆದರೆ ಕಾಂಗ್ರೆಸ್ ನಾಯಕರು ಮಾತ್ರ ತಮ್ಮ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವಿ ಮಾಡಿದ್ದರು. ಆದರೂ ಯಾವುದೇ ಪಕ್ಷದ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿದ್ದೇನೆ ಎಂದು ಹೇಳಿದರು.