×
Ad

ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಜನರು

Update: 2023-10-30 15:06 IST

ಬೆಂಗಳೂರು: ನಗರದ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿ ಭಾಗದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ವಿಡಿಯೋ ವೈರಲ್‌ ಆಗಿದೆ. ಇದನ್ನು ಕಂಡ ಈ ಭಾಗದ ಜನರು ಆತಂಕಗೊಂಡಿದ್ದಾರೆ.

ಸಿಂಗಸಂದ್ರದ ಎಇಸಿಎಸ್‌ ಲೇಔಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಇದೀಗ ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಹುಡುಕಾಟ ಮುಂದುವರಿಸಿದ್ದಾರೆ.

ಬೀದಿ ನಾಯಿಗಳು ಚಿರತೆ ಓಡಿಸಿಕೊಂಡು ಹೋಗುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಈ ಹಿಂದೆಯೂ ಎಲೆಕ್ಟ್ರಾನಿಕ್ಸ್ ಸಿಟಿ ಮತ್ತು ಬೆಂಗಳೂರು ದಕ್ಷಿಣ ಭಾಗದಲ್ಲಿ ಚಿರತೆ ಸಂಚರಿಸಿರುವ ಕುರುಹುಗಳು ಕಂಡು ಬಂದಿದ್ದವು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News