×
Ad

ಧಮ್ಮು, ತಾಕತ್ತಿದ್ದರೆ ತಮಿಳುನಾಡಿಗೆ ನೀರು ಬಿಡದೇ ಕೋರ್ಟ್‍ನಲ್ಲಿ ವಾದ ಮಾಡಲಿ: ಬಸವರಾಜ ಬೊಮ್ಮಾಯಿ

Update: 2023-09-16 17:58 IST

ಬೆಂಗಳೂರು, ಸೆ. 16: ‘ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ರಾಜ್ಯ ಸರಕಾರ ಕೊಟ್ಟ ಮಾತು ಬದಲಾಯಿಸುತ್ತಿದ್ದು, ಇದೊಂದು ಊಸರವಳ್ಳಿ ಸರಕಾರ’ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರದ ಮೇಲೆ ತಮಿಳುನಾಡಿನ ಪ್ರಭಾವ ಇದ್ದ ಹಾಗೆ ಇದೆ. ಸುಪ್ರೀಂ ಕೊರ್ಟ್ ಆದೇಶ ಆಗಿಲ್ಲ. ಸಿಡಬ್ಲುಎಂಎ ಸಭೆ ಆಗಿಲ್ಲ ಆದರೂ ರಾಜ್ಯ ಸರಕಾರ ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಮಾಡಿ ರಾಜ್ಯದ ಜನತೆಗೆ ಧೋಖಾ ಮಾಡಿದೆ. ಇದರ ವಿರುದ್ದ ನಮ್ಮ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

‘ಆರಂಭದಲ್ಲಿ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು. ಅವರು ಹೇಳಿದ ಮಾರನೇ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ನೀರು ಬಿಡುತ್ತಾರೆ. ಸರಕಾರ ನೀರು ಬಿಡಲು ತೀರ್ಮಾನ ಮಾಡುವುದಾದರೆ ಸರ್ವಪಕ್ಷದ ಸಭೆ ಕರೆಯುವ ಅಗತ್ಯ ಏನಿತ್ತು? ಎಂದು ಅವರು ಪ್ರಶ್ನಿಸಿದರು.

ನೀರು ಬಿಡದೇ ವಾದ ಮಾಡಲಿ: ‘ಈ ಸರಕಾರಕ್ಕೆ ತಾಕತ್ತು, ಧಮ್ಮು ಇದ್ದರೆ ನೀರು ಬಿಡುತ್ತಿರಲಿಲ್ಲ. ನೀರು ಬಿಟ್ಟು ತಾಕತ್ತು ದಮ್ಮಿನ ಬಗ್ಗೆ ಮಾತನಾಡುತ್ತಾರೆ. ನಿಮಗೆ ತಾಕತ್ತು ದಮ್ ಇದ್ದರೆ ತಮಿಳುನಾಡಿಗೆ ನೀರು ಬಿಡದೇ ಸುಪ್ರೀಂ ಕೋರ್ಟ್‍ನಲ್ಲಿ ವಾದ ಮಾಡಿ ರಾಜ್ಯದ ಹಿತ ಕಾಪಾಡಲಿ ಎಂದು ಬೊಮ್ಮಾಯಿ ಸವಾಲು ಹಾಕಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News