×
Ad

ಕೇಂದ್ರ ಬಜೆಟ್‍ನಿಂದ ಕರ್ನಾಟಕಕ್ಕೆ ಹೆಚ್ಚಿನ ನೆರವು ಸಿಗಲಿ : ಸಚಿವ ಎಚ್.ಕೆ.ಪಾಟೀಲ್

Update: 2024-07-22 19:27 IST

 ಎಚ್.ಕೆ.ಪಾಟೀಲ್

ಬೆಂಗಳೂರು : ಕೇಂದ್ರ ಆಯವ್ಯಯ ಮಂಡನೆ ನಾಳೆ(ಜು.23) ನಡೆಯಲಿದ್ದು, ರಾಜ್ಯದಿಂದ ಆಯ್ಕೆಯಾದ ಹಣಕಾಸು ಸಚಿವರೂ ಆಗಿರುವ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ನೆರವು ನೀಡುವ ನಿರೀಕ್ಷೆ ಇದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾವು ದಿಲ್ಲಿಗೆ ಹೋಗಿ ಸಂಸದರ, ಕೇಂದ್ರ ಸಚಿವರ ಸಭೆ ಮಾಡಿದ್ದೇವೆ. ಕೇಂದ್ರ ಸಚಿವ ಕುಮಾರಸ್ವಾಮಿ ಹಲವು ಭರವಸೆ ನೀಡಿದ್ದಾರೆ. ಕರ್ನಾಟಕದ ಬಗ್ಗೆ ಕೆಲವು ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಆ ಹಿನ್ನಲೆಯಲ್ಲಿ ನಮ್ಮ ನಿರೀಕ್ಷೆಗಳು ಹೆಚ್ಚಿದೆ ಎಂದು ತಿಳಿಸಿದರು.

"ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ಹಣ ಬೇಕು, ನೀರಾವರಿ ಯೋಜನೆಗೆ ನೆರವು ಕೊಡಬೇಕು. ರಾಜ್ಯ ಸರಕಾರದ ಮನವಿ ಏನಿದೆ ಎಂದು ನನಗೆ ಗೊತ್ತಿಲ್ಲ. ಆದರೆ, ಕೇಂದ್ರ ಸರಕಾರವು ರಾಜ್ಯಕ್ಕೆ ಕಾನೂನು ಬದ್ಧವಾಗಿ ಹಣ ಕೊಡಲಿ.  ಪ್ರಧಾನಿ ಮೋದಿ , ಹತ್ತು ವರ್ಷಗಳಿಂದ ರಾಜ್ಯಕ್ಕೆ ಅವರು ಅನ್ಯಾಯ ಮಾಡಿಕೊಂಡೇ ಬರುತ್ತಿದ್ದಾರೆ"

ಸಂತೋಷ್ ಲಾಡ್, ಕಾರ್ಮಿಕ ಸಚಿವ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News