×
Ad

ವೈರಲ್ ಆಗುತ್ತಿರುವ ಪತ್ರ ನಕಲಿ: ಕಲಬುರಗಿ ಎಸ್ಪಿಗೆ ದೂರು ನೀಡಿದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್

Update: 2023-07-25 21:13 IST

ಕಲಬುರಗಿ, ಜು.25: 'ತಮ್ಮ ಹೆಸರಿನ ಹಳೆ ಲೆಟರ್ ಹೆಡ್‍ನ್ನು ಉಪಯೋಗಿಸಿ ಇಲ್ಲಸಲ್ಲದ ವಿಷಯವನ್ನು ಪ್ರಸ್ತಾಪ ಮಾಡಿ ನನ್ನ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ದ್ವೇಷ ಹುಟ್ಟಿಸಿ ಅದರ ರಾಜಕೀಯ ಲಾಭ ಪಡೆಯಲು ಕೆಲವು ಹುನ್ನಾರ ನಡೆಸಿದ್ದಾರೆ' ಎಂದು ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಆರೋಪಿಸಿದ್ದಾರೆ. 

''ಈ ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಟ್ಟರುವುದು ತನಿಖೆಯಾಗಬೇಕು. ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಯಲಿಗೆ ತರಬೇಕು. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು'' ಎಂದು ಬಿ.ಆರ್.ಪಾಟೀಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News