×
Ad

ನಟ ಪ್ರಕಾಶ್ ರಾಜ್ ರಿಗೆ ಜೀವ ಬೆದರಿಕೆ: ವಿಕ್ರಮ್ ಟಿವಿ ಯೂಟ್ಯೂಬ್ ಚಾನೆಲ್ ವಿರುದ್ಧ FIR ದಾಖಲು

Update: 2023-09-20 10:42 IST

Prakash Raj (Photo credit: wikipedia)

ಬೆಂಗಳೂರು, ಸೆ.20: ಖ್ಯಾತ ನಟ ಪ್ರಕಾಶ್ ರಾಜ್ ಅವರಿಗೆ ಜೀವ ಬೆದರಿಕೆಯೊಡ್ಡುವಂತಹ ವೀಡಿಯೋಗಳನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ವಿಕ್ರಮ್ ಟಿವಿ ಯೂಟ್ಯೂಬ್ ಚಾನೆಲ್ ವಿರುದ್ಧ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ವಿಕ್ರಮ್ ಟಿವಿ ಯೂಟ್ಯೂಬ್ ನಲ್ಲಿ ಇತ್ತೀಚೆಗೆ ಅಪ್ಲೋಡ್ ಮಾಡಿದ್ದ ಎರಡು ವೀಡಿಯೋಗಳಲ್ಲಿ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ತನಗೆ ಜೀವ ಬೆದರಿಕೆಯೊಡ್ಡುವ ಅಂಶಗಳನ್ನು ಆ ವೀಡಿಯೊಗಳು ಒಳಗೊಂಡಿತ್ತು. ಇದಲ್ಲದೆ ತನ್ನ ಕುಟುಂಬದವರಿಗೂ ಜೀವ ಬೆದರಿಕೆ ಹಾಕುವ ಅಂಶಗಳು ಆ ವೀಡಿಯೊದಲ್ಲಿದ್ದವು. ಆದ್ದರಿಂದ ವಿಕ್ರಮ್ ಟಿವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಪ್ರಕಾಶ್ ರಾಜ್ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರೋಪಿತರ ವಿರುದ್ಧ ಐಪಿಸಿ ಸೆಕ್ಷನ್ 506, 504, 505(2) ಅಡಿಯಲ್ಲಿ ಮೊಕದ್ದಮೆ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News