×
Ad

ಸಾಹಿತಿಗಳಿಗೆ ಜೀವ ಬೆದರಿಕೆ ಪ್ರಕರಣ: ವಿಶೇಷ ತನಿಖಾ ತಂಡ ರಚನೆಗೆ ಸಿಎಂ ಆದೇಶ

Update: 2023-08-24 19:24 IST

ಬೆಂಗಳೂರು: ʼನಾಡಿನ ಸಾಹಿತಿಗಳು ಮತ್ತು ಚಿಂತಕರಿಗೆ ನಿರಂತರವಾಗಿ ಬರುತ್ತಿರುವ ಜೀವ ಬೆದರಿಕೆ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿ ಈ ಎಲ್ಲ ಪ್ರಕರಣಗಳ ಸಮಗ್ರ ತನಿಖೆಗಾಗಿ ಎಸಿಪಿ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆಗೆ ಆದೇಶಿಸಲಾಗಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಈ ಕುರಿತು ಟ್ವೀಟ್‌ ಮಾಡಿರುವ ಅವರು, ʻʻಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ರಾಜ್ಯ ಸರ್ಕಾರ ಬದ್ದವಾಗಿದ್ದು, ಜೀವ ಬೆದರಿಕೆ ಮತ್ತು ಚಾರಿತ್ರ್ಯಹನನದ ದುಷ್ಕೃತ್ಯದಲ್ಲಿ ತೊಡಗಿರುವ ದುಷ್ಕರ್ಮಿಗಳು ಮತ್ತು ಅವರ ಹಿಂದಿರುವ ಸಂಘಟನೆಗಳನ್ನು ಮಟ್ಟಹಾಕಲೇಬೇಕು ಎಂಬ ಸಂಕಲ್ಪ ಮಾಡಿದ್ದೇವೆʻʻ ಎಂದು ತಿಳಿಸಿದ್ದಾರೆ. 

ʻʻಜೀವ ಬೆದರಿಕೆಗೆ ಸಂಬಂಧಿಸಿದಂತೆ ಬೇರೆ ಬೇರೆ ಠಾಣೆಗಳಲ್ಲಿ ಈ ಹಿಂದೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ತನಿಖಾ ತಂಡಕ್ಕೆ ವರ್ಗಾವಣೆ ಮಾಡುವಂತೆ ಆದೇಶಿಸಲಾಗಿದೆʻʻ ಎಂದು ಅವರು ಮಾಹಿತಿ ನೀಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News