ಲೋಕಸಭಾ ಚುನಾವಣೆ | ನಾಳೆ(ಎ.24) ಬಹಿರಂಗ ಪ್ರಚಾರಕ್ಕೆ ತೆರೆ

Update: 2024-04-23 16:10 GMT

ಬೆಂಗಳೂರು: ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ನಾಳೆ(ಎ.24) ಸಂಜೆ ತೆರೆ ಬೀಳಲಿದೆ. ಗುರುವಾರ ಮನೆ, ಮನೆಪ್ರಚಾರಕ್ಕೆ ಮಾತ್ರ ಅವಕಾಶವಿದೆ.

ಈ 14 ಕ್ಷೇತ್ರಗಳಲ್ಲಿ ಮಾ.28ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿತ್ತು. 11 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್- ಜೆಡಿಎಸ್ ಮಧ್ಯೆ ಸ್ಪರ್ಧೆ ಇದೆ.

ಬಿಜೆಪಿ, ಕಾಂಗ್ರೆಸ್‍ನ ಕೇಂದ್ರ, ರಾಜ್ಯಗಳ ಘಟಾನುಘಟಿ ನಾಯಕರು ಹಲವು ಸುತ್ತಿನ ಪ್ರಚಾರ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೈಸೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಬಹಿರಂಗ ಸಭೆಯ ಮೂಲಕ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಪರ ಮತ ಯಾಚಿಸಿದ್ದಾರೆ. ಮಂಗಳೂರಿನಲ್ಲಿ ರೋಡ್ ಶೋ ನಡೆಸಿ ಕರಾವಳಿಯ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News