ಲೋಕಸಭಾ ಚುನಾವಣೆ : 3 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಜೆಡಿಎಸ್‌

Update: 2024-03-26 12:53 GMT

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಪಕ್ಷವು ತನ್ನ ಪಾಲಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ನಿರೀಕ್ಷೆಯಂತೆಯೇ ಮಂಡ್ಯದಿಂದ ಸ್ವತಃ ಮಾಜಿ ಸಿಎಂ, ಜೆಡಿಎಸ್‌ ರಾಜಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಿದರೆ, ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುವ ಹಾಸದನದಿಂದ ಎಚ್.ಡಿ ದೇವೇಗೌಡ ಮೊಮ್ಮಗ ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ಘೋಷಿಸಿದೆ. ಅಲ್ಲದೆ ,ಕೋಲಾರದಿಂದ ಮಲ್ಲೇಶ್‌ ಬಾಬು ಅವರಿಗೆ ಜೆಡಿಎಸ್ ಟಿಕೆಟ್‌ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News