×
Ad

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

Update: 2023-08-17 09:43 IST

ಬೆಂಗಳೂರು, ಆ.17: ಬೆಂಗಳೂರು, ಕೊಡಗು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ಧಾರವಾಡ ಸಹಿತ ಹಲವೆಡೆ ಸರಕಾರಿ ಅಧಿಕಾರಿಗಳ ಕಚೇರಿ, ಮನೆಗಳ ಮೇಲೆ ಗುರುವಾರ ಮುಂಜಾನೆ ಲೋಕಾಯುಕ್ತ ದಾಳಿ ನಡೆದಿದೆ.

ತುಮಕೂರು: ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ಲಾನಿಂಗ್ ವಿಭಾಗದ ಜಂಟಿ ನಿರ್ದೇಶಕರ ಮನೆ ಮೇಲೆ ತುಮಕೂರು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂದು ಬೆಳಗ್ಗೆ ದಾಳಿ ನಡೆಸಿರುವುದು ವರದಿಯಾಗಿದೆ.

ಪ್ಲಾನಿಂಗ್ ವಿಭಾಗದ ಜಂಟಿ ನಿರ್ದೇಶಕ ನಾಗರಾಜು ಎಂಬುವರ ಮನೆ (ದೇವನೂರು ಚರ್ಚ್ ಬಳಿ) ಹಾಗೂ ಅರಸೀಕೆರೆ ಮನೆ, ಕಚೇರಿ ಮೇಲು ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ.

ತಮ್ಮ ಆದಾಯಕ್ಕಿಂತ ಮೀರಿ ಹೆಚ್ಚಿನ ಆಸ್ತಿಪಾಸ್ತಿ ಹೊಂದಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ

ಧಾರವಾಡ: ಧಾರವಾಡದಲ್ಲಿ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಧಾರವಾಡ ಪಾಲಿಕೆಯಲ್ಲಿ ವಲಯ ಅಧಿಕಾರಿಯಾಗಿ ಇತ್ತೀಚಿಗೆ ವರ್ಗಾವಣೆಗೊಂಡಿರುವ ಸಂತೋಷ ಆನಿಶೆಟ್ಟರ ಎಂಬವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ನಾಲ್ವರು ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

ಕೊಪ್ಪಳ: ಇಲ್ಲಿನ ನಿರ್ಮಿತಿ ಕೇಂದ್ರದ ಕಚೇರಿ ವ್ಯವಸ್ಥಾಪಕ ಮಂಜುನಾಥ ಬನ್ನಿಕೊಪ್ಪ ಅವರು ಕೆಲಸ ಮಾಡುವ ಕಚೇರಿ ಹಾಗೂ ಮನೆ ಮೇಲೆ ಇಂದು ಬೆಳಗ್ಗೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಒಟ್ಟು ಐದು ತಂಡಗಳಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು, ಮಂಜುನಾಥ ಹೂಡಿಕೆ ಮಾಡಿರುವ ಕೊಪ್ಪಳ ತಾಲೂಕಿನ ಹುಲಿಗಿಯ ಮಾರ್ಕ್ ಇನ್ ಲಾಡ್ಜ್ ನಲ್ಲೂ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News