×
Ad

ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ, ದಾಖಲೆಗಳ ಪರಿಶೀಲನೆ

Update: 2024-11-12 13:53 IST

ಸಾಂದರ್ಭಿಕ ಚಿತ್ರ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ರಾಜ್ಯದ ಹಲವೆಡೆ ಸರಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಧಾರವಾಡದ ಮೂರು ಕಡೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಎರಡು, ಗದಗ ಜಿಲ್ಲೆ ನರಗುಂದದಲ್ಲಿ ಒಂದು, ಬೀದರ್​, ದಾವಣಗೆರೆ ಮತ್ತು ಮೈಸೂರಿನ ಒಂದು ಕಡೆ ದಾಳಿ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸರಕಾರಿ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News