×
Ad

ಅಕ್ರಮ ಆಸ್ತಿ ಗಳಿಕೆ ಆರೋಪ | ನಾಲ್ವರು ಅಧಿಕಾರಿಗಳ ನಿವಾಸ-ಕಚೇರಿ ಮೇಲೆ ಲೋಕಾಯುಕ್ತ ದಾಳಿ; 26.55 ಕೋಟಿ ಮೌಲ್ಯದ ಆಸ್ತಿ ಪತ್ತೆ

Update: 2025-05-08 21:16 IST

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪದಡಿ ನಾಲ್ವರು ಅಧಿಕಾರಿಗಳಿಗೆ ಸೇರಿದ ಬೆಂಗಳೂರು, ಕೋಲಾರ, ದಾವಣಗೆರೆ ಮತ್ತು ಯಾದಗಿರಿ ಜಿಲ್ಲೆಗಳ 24 ಸ್ಥಳಗಳಲ್ಲಿ ಗುರುವಾರ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, 26.55 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ.ಶ್ರೀನಿವಾಸಮೂರ್ತಿ, ಕೋಲಾರ ತಾಲೂಕಿನ ಭೂಮಾಪನಾ ಇಲಾಖೆ ಸರ್ವೇ ಅಧಿಕಾರಿ ಸುರೇಶ್ ಬಾಬು ಜಿ., ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ(ದಾವಣಗೆರೆ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಬಿ.ರವಿ ಹಾಗೂ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ಆರೋಗ್ಯಾಧಿಕಾರಿ ಡಾ.ರಾಜಾ ವೆಂಕಟಪ್ಪ ನಾಯಕ ಎಂಬುವರಿಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ದಾಳಿ ಸಂದರ್ಭದಲ್ಲಿ ಜಿ.ಶ್ರೀನಿವಾಸಮೂರ್ತಿ ಅವರ 3.45 ಕೋಟಿ ರೂ., ಸುರೇಶ್ ಬಾಬು ಅವರ 8.18 ಕೋಟಿ ರೂ., ಎಂ.ಬಿ.ರವಿ ಅವರ 2.31 ಕೋಟಿ ರೂ., ಡಾ.ರಾಜಾ ವೆಂಕಟಪ್ಪ ನಾಯಕ ಅವರ 12.59 ಕೋಟಿ ರೂ.ಗಳಷ್ಟು ಆಸ್ತಿ ಮೌಲ್ಯ ಪತ್ತೆಯಾಗಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News