×
Ad

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Update: 2023-12-05 10:48 IST

ಕಲಬುರಗಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಯಾದಗಿರಿಯಲ್ಲಿ ಡಿಹೆಚ್ಓ ಆಗಿರುವ ಡಾ. ಪ್ರಭುಲಿಂಗ ಮಾನಕರ ಅವರ ಕಲಬುರಗಿಯ ಕರುಣೇಶ್ವರ ಕಾಲೋನಿಯಲ್ಲಿನ ನಿವಾಸ, ಫಾರ್ಮ್ ಹೌಸ್ ಮತ್ತು ಯಾದಗಿರಿಯ ಕಚೇರಿಯ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಗತ್ಯ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬಳ್ಳಾರಿಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬಳ್ಳಾರಿ ಮತ್ತು ವಿಜಯನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಚಂದ್ರಶೇಖರ ಹಾಗೂ ಅರಣ್ಯ ಇಲಾಖೆಯ ಡಿಆರ್ ಎಫ್ ಓ ಅವರ ಬಳ್ಳಾರಿ, ಗಂಗಾಗವತಿ ಮತ್ತು ಹೊಸಪೇಟೆ, ಕಂಪ್ಲಿಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News