×
Ad

ಮದ್ದೂರು | ಪ್ರಚೋದನಾಕಾರಿ ಭಾಷಣ ಆರೋಪ ; ಯತ್ನಾಳ್‌ ವಿರುದ್ಧ ಎಫ್‌ಐಆರ್‌

Update: 2025-09-12 13:03 IST

ಮಂಡ್ಯ : ಮದ್ದೂರಿನಲ್ಲಿ ಗುರುವಾರ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದಾರೆ.

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ಗುರುವಾರ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿ ಜನರನ್ನು ಉದ್ದೇಶಿಸಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮದ್ದೂರು ಠಾಣೆ ಪಿಎಸ್ಐ ಮಂಜುನಾಥ್ ದೂರಿನನ್ವಯ ಕಲಂ ಬಿಎನ್ಎಸ್ 196 (1)(a), 299, 353(2) ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.

ಯತ್ನಾಳ್ ಮದ್ದೂರಿನಲ್ಲಿ ಹೇಳಿದ್ದೇನು? :

'ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಾನು ಸಿಎಂ ಆಗಿ ಮುಸ್ಲಿಮರ ಮೀಸಲಾತಿ ತೆಗೆದು ಹಿಂದೂಗಳಿಗೆ ಹಂಚುತ್ತೇನೆ. ಕರ್ನಾಟಕ ಬಿಜೆಪಿಯವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಅದಕ್ಕೆ ಹಿಂದೂಗಳ ಪರ ಗಟ್ಟಿಯಾಗಿ ಮಾತನಾಡುವುದಿಲ್ಲ. ಮಾಜಿ ಸಂಸದ ಪ್ರತಾಪ್ ಸಿಂಹ ನಾವೆಲ್ಲಾ ಹಿಂದೂಗಳ ಪರವಾಗಿ ಗಟ್ಟಿಯಾಗಿ ಮಾತಾನಾಡುತ್ತೇವೆ. ನಾವು ಪ್ರತಾಪ್ ಒಂದಾಗಿ ಹೊಸ ಸರಕಾರವನ್ನು ಅಧಿಕಾರಕ್ಕೆ ತರುತ್ತೇವೆ. ನಾನು ಅಧಿಕಾರಕ್ಕೆ ಬಂದರೆ ಗೋ ಹತ್ಯೆ ಮಾಡುವವರಿಗೆ ಒಂದು ಗತಿ ಕಾಣಿಸುತ್ತೇನೆ. ವಕ್ಫ್ ಅನುದಾನ ಗೋರಕ್ಷಕರಿಗೆ ನೀಡುತ್ತೇನೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಮಸೀದಿ ಮುಂದೆ ಗಂಟೆಗಟ್ಟಲೆ ಡ್ಯಾನ್ಸ್ ಮಾಡಲು ಅವಕಾಶ ಕೊಡುತ್ತೇನೆ" ಎಂದು  ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News