×
Ad

ಮದ್ದೂರು | ದಶಪಥ ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರು ಢಿಕ್ಕಿ: ಇಬ್ಬರು ಮೃತ್ಯು

Update: 2024-01-14 10:54 IST

ಮಂಡ್ಯ, ಜ.14: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ವಿರುದ್ಧ ದಿಕ್ಕಿನ ರಸ್ತೆಗೆ ಉರುಳಿಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ಮದ್ದೂರು ಪಟ್ಟಣ ಸಮೀಪ ಸಂಭವಿಸಿದೆ.

ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ಸಿಬ್ಬಂದಿಯಾದ ಶಂಕರ್ ಮತ್ತು ಮಹದೇವು ಎಂಬವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೋರ್ವ ಕಿಶೋರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಈ ಅಪಘಾತ ಸಂಭವಿಸಿದೆ. ಈ ಮೂವರು ಕೆಲಸದ ನಿಮಿತ್ತ ಮೈಸೂರಿಗೆ ತೆರಳಿದ್ದವರು ಅಲ್ಲಿಂದ ಶನಿವಾರ ಬೆಳಗಿನ ಜಾವ 4:30ರ ವೇಳೆ ಬೊಲೆರೋ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮದ್ದೂರು ಪಟ್ಟಣದ ಎಲಿವೇಟೆಡ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಿಂಷಾ ನದಿ ಸೇತುವೆ ಮೇಲೆಯೇ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ಬಳಿಕ ಸಿಸಿಟಿವಿ ಕ್ಯಾಮೆರಾ ಕಂಬಕ್ಕೂ ಢಿಕ್ಕಿ ಹೊಡೆದ ಕಾರು ಮೈಸೂರು ಕಡೆಗೆ ಹೋಗುವ ರಸ್ತೆಗೆ ಉರುಳಿ ಬಿದ್ದಿದೆ.

ಈ ಬಗ್ಗೆ ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News