×
Ad

ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ | ಪ್ರತೀಕಾರದ ಕೊಲೆ ಎಂದು ಬಿಂಬಿಸುವುದು ಸರಿಯಲ್ಲ : ಮಧು ಬಂಗಾರಪ್ಪ

Update: 2025-05-28 16:45 IST

ಮಧು ಬಂಗಾರಪ್ಪ

ಶಿವಮೊಗ್ಗ : ಮಂಗಳೂರಿನ ಬಂಟ್ವಾಳ ತಾಲೂಕಿನ ಅಬ್ದುಲ್ ರಹ್ಮಾನ್‌ ಹತ್ಯೆ ಪ್ರಕರಣವನ್ನು ಪ್ರತೀಕಾರದ ಕೊಲೆ ಎಂದು ಏಕಾಏಕಿ ಬಿಂಬಿಸುವುದು ಸರಿಯಲ್ಲ. ಮೊದಲು ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಏಕಾಏಕಿ ಮಾಧ್ಯಮಗಳಲ್ಲಿ ಪ್ರತೀಕಾರದ ಕೊಲೆ ಎಂದು ಬಿಂಬಿಸಿದರೆ ಏನಾಗಲಿದೆ ಎಂಬುದನ್ನು ಯಾರಾದರೂ ಗಮನಿಸಿದ್ದಾರಾ ಎಂದು ಅವರು ಪ್ರಶ್ನಿಸಿದರು.

ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ನಟ ಕಮಲ್ ಹಾಸನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬೇರೆಯವರಿಂದ ಕನ್ನಡದ ಬಗ್ಗೆ ಕಲಿಯಬೇಕಿಲ್ಲ. ಕಮಲ್ ಹಾಸನ್ ಯಾವ ನೆಲೆಯಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದಾರೆ ಎಂಬುದನ್ನು ನೋಡಬೇಕು ಎಂದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವನಾಗಿ ಎರಡು ವರ್ಷ ಪೂರ್ಣಗೊಳಿಸಿದ್ದು, ಮೇ 29 ರಂದು ಬೆಂಗಳೂರಿನಲ್ಲಿ ‘ಎರಡು ವರ್ಷ; ಶಿಕ್ಷಣದಲ್ಲಿ ಹರುಷ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News