×
Ad

ಮಡಿಕೇರಿ: ಕೆಎಸ್ಸಾರ್ಟಿಸಿ ಡಿಪೋ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

Update: 2023-08-29 20:40 IST

ಸಾಂದರ್ಭಿಕ ಚಿತ್ರ

ಮಡಿಕೇರಿ ಆ.29 : ಮಡಿಕೇರಿಯ ಕೆಎಸ್ಸಾರ್ಟಿಸಿ ಡಿಪೋದ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ವರದಿಯಾಗಿದೆ.

ಡಿಪೋದಲ್ಲಿ ಕಿರಿಯ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಹೆಬ್ಬಾಲೆ ಗ್ರಾಮದ ನಿವಾಸಿ ಅಭಿಷೇಕ್ ವಿಷ ಸೇವಿಸಿದ್ದು, ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಧಿಕಾರಿಯ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಆರೋಪಿಸಲಾಗಿದೆ.

ಆದರೆ ಅಭಿಷೇಕ್ ಚಿಕಿತ್ಸೆಯಲ್ಲಿದ್ದು, ಇವರ ಹೇಳಿಕೆಯ ನಂತರವಷ್ಟೇ ನಿಖರ ಮಾಹಿತಿ ಲಭಿಸಲಿದೆ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News