×
Ad

ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2025-10-07 13:08 IST

ಬೆಂಗಳೂರು : ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದ ಅವರು, ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನು ಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣ ದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಶೂದ್ರ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದರು. ವಾಲ್ಮೀಕಿಯವರ ಪ್ರತಿಮೆಯನ್ನು 2017ರಲ್ಲಿ ಸ್ಥಾಪಿಸಲಾಯಿತು. ವಾಲ್ಮೀಕಿ ಹಾಗೂ ಕನಕದಾಸರಂತಹ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ಮಾನವೀಯ ಮೌಲ್ಯಗಳನ್ನು ಅನುಸರಿದವರು ಎಂದರು.

ಸಚಿವಸಂಪುಟ ಪುನರ್ ರಚನೆ :

ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದರು.

ಮನುವಾದಿಗಳ ಕೈವಾಡ :

ಸರ್ವೋಚ್ಛ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಮುಖ್ಯ ನ್ಯಾಯಮೂರ್ತಿಯವರೇ ಈ ಘಟನೆಯನ್ನು ಕ್ಷಮಿಸಿದ್ದು, ಅವರ ದೊಡ್ಡಗುಣವನ್ನು ಬಿಂಬಿಸುತ್ತದೆ. ಆದರೆ, ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಮನುವಾದಿಗಳ ಕೈವಾಡವಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News