×
Ad

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ನೀಡಿದ್ದ ಸಚಿವ ಸ್ಥಾನಮಾನ ವಾಪಸ್

Update: 2025-05-31 19:01 IST

ಮಹೇಶ್ ಜೋಶಿ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ದರ್ಜೆ ಸ್ಥಾನಮಾನ ಮತ್ತು ಎಲ್ಲ ಸವಲತ್ತುಗಳನ್ನು ರಾಜ್ಯ ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಪಸ್ ಪಡೆದಿದೆ.

ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಕಾರ್ಯವೈಖರಿಯನ್ನು ಆಕ್ಷೇಪಿಸಿ ಕೆಲ ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲಿಖಿತ ದೂರು ನೀಡಿದ್ದರು. ಮಹೇಶ್ ಜೋಶಿಗೆ ನೀಡಲಾಗಿರುವ ಸಚಿವ ದರ್ಜೆ ಸ್ಥಾನಮಾನ ಹಿಂಪಡೆಯಬೇಕು. ಅಲ್ಲದೆ, ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದಿಂದ ಇಳಿಸಬೇಕು ಎಂದು ಮನವಿ ಮಾಡಿದ್ದರು.

ಈ ಮಧ್ಯೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಆದೇಶ ಹೊರಡಿಸಿದ್ದು, 2023ರ ಜನವರಿ 5ರಂದು ಮಹೇಶ್ ಜೋಶಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News