ಕಸಾಪ ಮಹೇಶ್ ಜೋಶಿ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿ ಸರಕಾರ ಆದೇಶ
ಮಹೇಶ್ ಜೋಶಿ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳ ಸಮಿತಿ ರಚಿಸಿ ಕನ್ನಡ ಸಂಸ್ಕೃತಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.
ಸಹಕಾರ ಸಂಘಗಳ ನಿಬಂಧಕರು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಶಾಖೆಯ ಜಂಟಿ ನಿರ್ದೇಶಕರು, ಬೆಂಗಳೂರು ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರು, ಕನ್ನಡ ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಯ ಜಂಟಿ ನಿರ್ದೇಶಕರು, ಲೆಕ್ಕಾಧಿಕಾರಿ ಹಾಗೂ ಪತ್ರಾಂಕಿತ ವ್ಯವಸ್ಥಾಪಕರನ್ನೊಳಗೊಂಡು ಆರು ಮಂದಿ ಅಧಿಕಾರಿಗಳ ಸಮಿತಿ ರಚಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವಧಿಯಲ್ಲಿ ಅನೇಕ ಹಣಕಾಸಿನ ಅವ್ಯವಹಾರ ಹಾಗೂ ಕಸಾಪ ಸದಸ್ಯರಿಗೆ ವಿನಾಕಾರಣ ನೋಟಿಸ್ ನೀಡಿ ಕಿರುಕುಳ ನೀಡಲಾಗುತ್ತಿರುವ ಬಗ್ಗೆ ಅನೇಕ ದೂರುಗಳು ಬಂದಿವೆ. ಆದ್ದರಿಂದ ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, 30 ದಿನಗಳಲ್ಲಿ ತನಿಖಾ ವರದಿ ನೀಡಬೇಕು ಎಂದು ಪ್ರಕಟನೆ ತಿಳಿಸಿದೆ.