ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ
Update: 2026-01-31 15:41 IST
ಮಹೇಶ್ ಶೆಟ್ಟಿ ತಿಮರೋಡಿ
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ.
ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು 21 ದಿನದೊಳಗೆ ಪ್ರಕರಣದ ಮರು ವಿಚಾರಣೆ ನಡೆಸಿ ಆದೇಶ ನೀಡುವಂತೆ ನ್ಯಾಯಾಲಯ ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಸೂಚಿಸಿದೆ.