×
Ad

ಜ.21ಕ್ಕೆ ಮಂಗಳೂರಿನಲ್ಲಿ ‘ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ’

Update: 2024-01-11 20:49 IST

ಬೆಂಗಳೂರು: ಮಂಗಳೂರಿನಲ್ಲಿ ಜ.21ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ.

ಜತೆಗೆ, ಈ ಸಮಾವೇಶದಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಚಾರ ನಡೆಸಲಾಗುವುದು. ಅಲ್ಲದೆ, ಪಕ್ಷ ಸಂಘಟನೆ ದೃಷ್ಟಿಯಿಂದ ಬೂತ್ ಮಟ್ಟದ ಕಾರ್ಯಕರ್ತರಿಗೆ ಮಾಹಿತಿ ನೀಡಿ, ತಪ್ಪದೇ ಭಾಗವಹಿಸುವಂತೆ ನೋಡಿಕೊಳ್ಳುವ ಜವಾಬ್ದಾರಿವಹಿಸಿಕೊಂಡು ಸಮಾವೇಶ ಯಶಸ್ವಿಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News