ಸಿಎಂ ಡಿ.ಕೆ. ಶಿವಕುಮಾರ್ ಗೆ ವೀಡಿಯೋ ಕರೆ ಮಾಡಿ ಅಭಿನಂದನೆ ತಿಳಿಸಿದ ಮಲೇಷ್ಯಾ ಪ್ರಧಾನಿ
ಮಲೇಷ್ಯಾ ಪ್ರಧಾನಿಯನ್ನು ಕರ್ನಾಟಕಕ್ಕೆ ಆಹ್ವಾನಿಸಿದ ಸಿಎಂ
Screengrab: X/@DKShivakumar
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ರವಿವಾರ ವೀಡಿಯೋ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅನ್ವರ್ ಇಬ್ರಾಹಿಂ ಅವರು ಶುಭಾಶಯ ಕೋರಿದ್ದಾರೆ ಎಂದು ತಿಳಿಸಿದ್ದಾರೆ.
ಈ ವೇಳೆ ಕರ್ನಾಟಕ ಮತ್ತು ಮಲೇಷ್ಯಾ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಶಿಕ್ಷಣ, ತಂತ್ರಜ್ಞಾನ, ಹೊಸ ಅವಿಷ್ಕಾರ ಹಾಗೂ ಉಭಯ ಪ್ರದೇಶಗಳ ಜನರ ನಡುವಿನ ಸಂಪರ್ಕವನ್ನು ಹೆಚ್ಚಿಸುವ ಬಗ್ಗೆ ಮಾತುಕತೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಮಲೇಷ್ಯಾದ ಅನೇಕ ವಿದ್ಯಾರ್ಥಿಗಳು ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವುದರಿಂದ ಕರ್ನಾಟಕ - ಮಲೇಷ್ಯಾ ನಡುವಿನ ಸಹಕಾರವನ್ನು ಇನ್ನಷ್ಟು ವಿಸ್ತರಿಸಲು ಉತ್ತಮ ಅವಕಾಶಗಳಿವೆ ಎಂದೂ ತಿಳಿಸಿದ್ದಾರೆ.
ಮಲೇಷ್ಯಾಕ್ಕೆ ಭೇಟಿ ನೀಡುವುದಾಗಿ ಹೇಳಿರುವ ಸಿಎಂ ಡಿ ಕೆ ಶಿವಕುಮಾರ್, ಅರ್ಥಪೂರ್ಣ ಸಹಕಾರ ಮತ್ತು ಪರಸ್ಪರ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಅನ್ವರ್ ಇಬ್ರಾಹಿಂ ಅವರನ್ನು ಕರ್ನಾಟಕಕ್ಕೆ ಆಹ್ವಾನಿಸಿರುವುದಾಗಿ ತಿಳಿಸಿದ್ದಾರೆ.
Delighted to speak with the Honourable Prime Minister of Malaysia, who called to convey his warm wishes on my new responsibility as Chief Minister of Karnataka.
— DK Shivakumar (@DKShivakumar) June 7, 2026
Our discussion focused on strengthening ties between Karnataka and Malaysia, particularly in education, technology,… pic.twitter.com/dKg9BFWsHM