ನಾಯಕತ್ವ ಬದಲಾವಣೆ ಚರ್ಚೆ | ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರನ್ನು ದಿಲ್ಲಿಗೆ ಕರೆಸಿ ಮುಂದಿನ ತೀರ್ಮಾನ : ಮಲ್ಲಿಕಾರ್ಜುನ ಖರ್ಗೆ
Update: 2025-11-27 13:26 IST
ಮಲ್ಲಿಕಾರ್ಜುನ ಖರ್ಗೆ | Photo Credit : PTI
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಬೆನ್ನಲ್ಲೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಇತರ ಮೂರ್ನಾಲ್ಕು ನಾಯಕರನ್ನು ದಿಲ್ಲಿಗೆ ಕರೆಸಿಕೊಂಡು ಚರ್ಚೆ ನಡೆಸಿ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಈ ಕುರಿತು ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸೇರಿ ಮೂರ್ನಾಲ್ಕು ನಾಯಕರನ್ನು ದಿಲ್ಲಿಗೆ ಕರೆಸುತ್ತೇವೆ. ಎಲ್ಲರೂ ಒಟ್ಟಿಗೆ ಕುಳಿತು ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಎಂಬುದು ಏಕಾಂಗಿ ಅಲ್ಲ. ಅದೊಂದು ತಂಡ. ಹೈಕಮಾಂಡ್ ಒಟ್ಟಿಗೆ ಕುಳಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಮುಂದೆ ಏನು ಮಾಡಬೇಕೆಂದು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.