×
Ad

ಚಾಮರಾಜನಗರ: ಆನೆ ದಾಳಿಯಿಂದ ವ್ಯಕ್ತಿ ಮೃತ್ಯು

Update: 2023-07-10 08:40 IST

ಚಾಮರಾಜನಗರ: ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹನೂರು ತಾಲ್ಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಪ್ರಭುಸ್ವಾಮಿ ಬಿನ್ ಗುರುಸ್ವಾಮಿ (55) ಎಂದು ಗುರುತಿಸಲಾಗಿದೆ. ಪ್ರಭುಸ್ವಾಮಿ ಮತ್ತು ಆತನ ಮಗ ಚಂದ್ರು ಇಬ್ಬರೂ ಪೊರಕೆ ಕಡ್ಡಿ ಸಂಗ್ರಹಣೆಗಾಗಿ ಮಲೆಮಹದೇಶ್ವರ ವನ್ಯಜೀವಿಧಾಮಕ್ಕೆ ಸೇರಿದ ಪಿ ಜಿ ಪಾಳ್ಯ ವಲಯ ಅರಣ್ಯ ವ್ಯಾಪ್ತಿಯ ಆಲದಕೆರೆ ದೊಡ್ಡಿ ಅರಣ್ಯ ಪ್ರದೇಶಕ್ಕೆ ಹೋಗಿದ್ದಂತಹ ಸಂದರ್ಭದಲ್ಲಿ ಆನೆ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News