×
Ad

ಬೆಂಗಳೂರಿಗೆ ಆಗಮನಿಸುತ್ತಿದ್ದ ವಿಮಾನದ ಬಾಗಿಲು ತೆರೆಯಲು ಯತ್ನ: ಆರೋಪಿ ಬಂಧನ

Update: 2023-07-22 23:39 IST

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಆಗಮನಿಸುತ್ತಿದ್ದ ಅಂತಾರಾಷ್ಟ್ರೀಯ ವಿಮಾನದ ಹಿಂಬದಿಯ ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕರೊಬ್ಬರನ್ನು ಬಂಧಿಸಲಾಗಿದೆ ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕನನ್ನು ಆಂಧ್ರಪ್ರದೇಶ ಮೂಲದ ವೆಂಕಟ್ ಮೋಹಿತ್ (29) ಎಂದು ಗುರುತಿಸಲಾಗಿದೆ. ಜು.15 ರಂದು ಪ್ಯಾರಿಸ್ ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಏರ್ ಫ್ರಾನ್ಸ್ ಎಎಫ್-194 ವಿಮಾನದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ನಾಲ್ಕು ಗಂಟೆಗಳ ಮೊದಲು, ರಾತ್ರಿ 8 ಗಂಟೆಯ ಸುಮಾರಿಗೆ ಆರೋಪಿ ವೆಂಕಟ್ ಮೋಹಿತ್, ವಿಮಾನದ ಹಿಂಭಾಗದ ಎಡಭಾಗದಲ್ಲಿರುವ ಬಾಗಿಲು ತೆರೆಯಲು ಪ್ರಯತ್ನಿಸಿದರು ಎಂದು ಏರ್ ಫ್ರಾನ್ಸ್ ಇಂಡಿಯಾ ಅಧಿಕಾರಿ ದೂರಿನಲ್ಲಿ ಉಲ್ಲೇಖಿಸಿದ್ದು, ಈ ದೂರಿನ ಮೇರೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News