×
Ad

ಗೋಣಿಕೊಪ್ಪ: ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಪೊಲೀಸ್ ವಶ

Update: 2023-10-29 23:49 IST

ಎ.ಎಂ.ಕಾವೇರಪ್ಪ

ಮಡಿಕೇರಿ: ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆದಿದ್ದ ಆರೋಪದಡಿ ವ್ಯಕ್ತಿಯೊಬ್ಬರನ್ನು ಕೊಡಗು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗೋಣಿಕೊಪ್ಪದ ನಿವಾಸಿ ಎ.ಎಂ.ಕಾವೇರಪ್ಪ (48) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈತನ ಬಳಿಯಿಂದ 5 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಗಾಂಜಾ ಗಿಡಗಳನ್ನು ಬೆಳಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ವಿರಾಜಪೇಟೆ ಉಪ ವಿಭಾಗದ ಡಿವೈಎಸ್‍ಪಿ ಆರ್.ಮೋಹನ್ ಕುಮಾರ್, ಗೋಣಿಕೊಪ್ಪ ವೃತ್ತದ ಗೋವಿಂದರಾಜು, ಪಿಎಸ್‍ಐ ರೂಪಾದೇವಿ ಬಿರಾದರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಹಿತ ಆರೋಪಿಯನ್ನು ವಶಕ್ಕೆ ಪಡೆದರು.

ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ದಕ್ಷ ಕಾರ್ಯಾಚರಣೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News